ಬೆಂಗಳೂರು: ಅಕ್ಕನ ಮಗಳೊಂದಿಗಿನ ಲವ್ ಬ್ರೇಕ್ ಅಪ್ ಆಗಿದ್ದಕ್ಕೆ ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಆರ್.ಆರ್.ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಂಡ್ಯ ಮೂಲದ ಸಿದ್ದರಾಮ ಆತ್ಮಹತ್ಯೆಗೆ ಶರಣಾದ ಯುವಕ. ಬೆಂಗಳೂರಿನಲ್ಲಿ ಕಾರ್ಪೆಂಟರ್ ಕೆಲಸ ಮಾಡಿಕೊಂಡಿದ್ದ ಸಿದ್ದರಾಮ, ತನ್ನ ಅಕ್ಕನ ಮಗಳನ್ನು ಪ್ರೀತಿಸುತ್ತಿದ್ದ. ಇಬ್ಬರ ಪ್ರೀತಿಗೆ ಮನೆಯವರ ವಿರೋಧವೂ ಇರಲಿಲ್ಲ. ಪ್ರೇಯಸಿ ಜತೆಗೆ ಖುಷಿ ಖುಷಿಯುಂದಲೇ ಬರ್ತಡೇ ಕೂಡ ಆಚರಿಸಿಕೊಂಡಿದ್ದ. ಆದರೆ ಮೂರು ತಿಂಗಳಿಂದ ಯಾವುದೋ ಕಾರಣದಿಂದ ಮನಸ್ತಾಪ ಉಂಟಾಗಿದೆ ಎನ್ನಲಾಗಿದೆ. ಇದೇ ಕಾರಣಕ್ಕೆ ಸಿದ್ದರಾಮ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಆರ್.ಆರ್.ನಗರ ಠಾಣಾ ವ್ಯಾಪ್ತಿಯಲ್ಲಿರುವ ತಮ್ಮ ಮನೆಯಲೇ ಸೋಮವಾರ ಫ್ಯಾನಿಗೆ ನೇಣು ಹಾಕಿಕೊಂಡು ಸಿದ್ದರಾಮ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
PublicNext
08/09/2021 09:31 am