ನವದೆಹಲಿ: ಆಘಾತಕಾರಿ ಮತ್ತು ಅಮಾನವೀಯ ಘಟನೆಯೊಂದು ನೊಯ್ಡಾದ ಸೆಕ್ಟರ್ 100ರಲ್ಲಿನ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.
ಸೆಕ್ಯುರಿಟಿ ಗಾರ್ಡ್‌ಗಳು ಅಪಾರ್ಟ್‌ಮೆಂಟ್ ಒಂದರ ಇಬ್ಬರು ನಿವಾಸಿಗಳ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಈ ಘಟನೆಯಲ್ಲಿ ಓರ್ವನ ತಲೆಗೆ ಬಲವಾದ ಹೊಡೆತ ಬಿದ್ದಿದ್ದು, ಆತನ ರಕ್ತಸ್ರಾವವಾಗಿದ್ದರಿಂದ ಒದ್ದಾಡಿದ್ದಾನೆ. ಈ ಘಟನೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಸಂಬಂಧ ನೋಯ್ಡಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
PublicNext
09/09/2021 11:02 am