ಬೆಳಗಾವಿ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಭೀಕರ ಘಟನೆ ಬೆಳಗಾವಿ ತಾಲೂಕಿನಲ್ಲಿ ನಡೆದಿದೆ.
ಬೆಳಗಾವಿಯ ಚವ್ಹಾಟ ಗಲ್ಲಿಯ ಶ್ರೀನಾಥ್ ಡಿ.ಪವಾರ ಹಾಗೂ ಸದಾಶಿವ ನಗರದ ರುಚಿತ ಆರ್.ಧುಮಾವತ ಮೃತ ದುರ್ದೈವಿಗಳು. ಮೃತಪಟ್ಟ ಇಬ್ಬರೂ ಲಿಂಗರಾಜ್ ಕಾಲೇಜಿನಲ್ಲಿ ಬಿ.ಕಾಂ ಪದವಿಯ ಕೊನೆಯ ವರ್ಷದ ವಿದ್ಯಾರ್ಥಿಗಳು ಎಂಬ ಮಾಹಿತಿ ಲಭ್ಯವಾಗಿದೆ.
ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ನಿನ್ನೆ ರಾತ್ರಿ ಬರ್ಡೆ ಡಾಬಾ ಬಳಿ ಈ ದುರ್ಘಟನೆ ನಡೆದಿದೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
PublicNext
09/09/2021 12:03 pm