ಮುಂಬೈ: ಸಿನಿಮಾದಲ್ಲಿ ಚಾನ್ಸ್ ಕೊಡುವುದುದಾಗಿ ನಂಬಿಸಿ 21 ವರ್ಷದ ಮಾಡೆಲ್ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ 42 ವರ್ಷದ ನಿರ್ಮಾಪಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 'ತನ್ನ ಕೃತ್ಯವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆರೋಪಿಯು ಸಂತ್ರಸ್ತೆಗೆ ಬೆದರಿಕೆ ಹಾಕಿರುವುದಾಗಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಹೀಗಾಗಿ ಆತನನ್ನು ಸೆಪ್ಟೆಂಬರ್ 9ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ವರದಿಯಾಗಿದೆ.
PublicNext
09/09/2021 02:29 pm