ಮಂಡ್ಯ: ಜಿಲ್ಲೆಯ ಬೇಬಿ ಬೆಟ್ಟದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದರೆ ಇನ್ನೊಂದಡೆ ಮರಳು ಮಾಫಿಯಾ ಕೂಡ ಎಗ್ಗಿಲ್ಲದೇ ನಡೆಯುತ್ತಿದೆ. ಊರಿನ ರೈತರ ಅನುಕೂಲಕ್ಕಾಗಿ ನಿರ್ಮಿಸಿರುವ ಕೆರೆಯಲ್ಲಿ ಪ್ರಭಾವಿ ಮಹಾನುಭಾವನೊಬ್ಬ ಮರಳು ಮಾಫಿಯಾ ನಡೆಸುತ್ತಿದ್ದಾನೆ.
ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕ್ಯಾತನಹಳ್ಳಿ ಗ್ರಾಮದಲ್ಲಿರುವ ಕಿರಬನಕಟ್ಟೆ ಕೆರೆ ಬಳಿ ಹಲವು ವರ್ಷಗಳಿಂದ ಮರಳು ಫಿಲ್ಟರ್ ದಂಧೆ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಗ್ರಾಮದ ತಮ್ಮೇಗೌಡ ಹಾಗೂ ಅವರ ಮಕ್ಕಳಾದ ಅವಿನಾಶ್ ಹಾಗೂ ಆನಂದ್ ಈ ದಂಧೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಕೆರೆ ಪಕ್ಕದ ತಮ್ಮ ಜಮೀನಿಗೆ ಹೊರಗಡೆಯಿಂದ ಲೋಡ್ ಗಟ್ಟಲೇ ಮಣ್ಣನ್ನು ತಂದು ಶೇಖರಣೆ ಮಾಡಿಕೊಂಡು ಕೆರೆಯೊಳಗೆ ಗುಂಡಿ ನಿರ್ಮಿಸಿ, ಫಿಲ್ಟರ್ ಮಾಡಿ ನಿತ್ಯ 20ಕ್ಕೂ ಹೆಚ್ಚು ಟ್ರ್ಯಾಕ್ಟರ್ ಮರಳನ್ನು ಬೆಂಗಳೂರು ನಗರ ಹಾಗೂ ಸುತ್ತಲಿನ ಜಿಲ್ಲೆಗಳಿಗೆ ಸಾಗಿಸುತ್ತಿದ್ದಾರೆ. ಈ ಮೂಲಕ ಲಕ್ಷಾಂತರ ಹಣ ಗಳಿಸುತ್ತಿದ್ದಾರೆ ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಕೆ.ಆರ್.ಪೇಟೆ ಠಾಣೆಯ ಪಿಎಸ್‍ಐ ಬ್ಯಾಟರಾಯಗೌಡ ನೇತೃತ್ವದ ಪೊಲೀಸರ ತಂಡ ದಾಳಿ ಮಾಡಿ 25 ಲೋಡ್ ಮರಳು ಹಾಗೂ ಮಣ್ಣನ್ನು ವಶಪಡಿಸಿಕೊಂಡಿದ್ದಾರೆ.
PublicNext
09/09/2021 07:45 pm