ಚಿತ್ರದುರ್ಗ : ಮಹಿಳೆಗೆ ಚಾಕು ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯಲ್ಲಿ ಘಟನೆ ನಡೆದಿದೆ. ಹತ್ಯೆಯಾಗಿರುವ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಸ್ಕೂಟಿಯಲ್ಲಿ ಬಂದಿದ್ದ ಮಹಿಳೆಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಆರೋಪಿ ಪರಾರಿಯಾಗಿದ್ದು, ಹತ್ಯೆಯಾದ ಸ್ಥಳದಲ್ಲಿ ಆರೋಪಿಯ ಚಪ್ಪಲಿ ಹಾಗೂ ಚಾಕು ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಜಿ ರಾಧಿಕಾ ಹಾಗೂ ಪೋಲಿಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂದಿನ ಕ್ರಮ ಕೈಗೊಂಡಿದ್ದಾರೆ.
PublicNext
10/09/2021 09:28 pm