ಮುಂಬೈ: ದೇಶದ ವಾಣಿಜ್ಯನಗರಿ ಮುಂಬೈನಲ್ಲಿ ಗಣೇಶೋತ್ಸವದಂದು ಗ್ಯಾಂಗ್ ರೇಪ್ ನಡೆದಿದೆ. ಬೀದಿ ಕಾಮುಕರು ಅತ್ಯಾಚಾರ ಮಾಡಿದ್ದಲ್ಲದೇ ಮಹಿಳೆಯ ಖಾಸಗಿ ಭಾಗಕ್ಕೆ ರಾಡ್ ಹಾಕಿ ರಾಕ್ಷಸಿ ಕೃತ್ಯ ಎಸಗಿದ್ದಾರೆ.
ದೆಹಲಿಯ ನಿರ್ಭಯಾ ಪ್ರಕರಣದಂತೆಯೇ ಈ ಘಟನೆ ನಡೆದಿದೆ. ಮುಂಬೈನ ಸಾಕಿ ನಾಕಾ ಪ್ರದೇಶದಲ್ಲಿ 35 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದ್ದು, ಬಳಿಕ ದುಷ್ಕರ್ಮಿಗಳು, ಖಾಸಗಿ ಭಾಗಕ್ಕೆ ರಾಡ್ ಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಸದ್ಯ, ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಉಳಿದವರಿಗಾಗಿ ಪತ್ತೆ ಕಾರ್ಯ ಆರಂಭಿಸಿದ್ದಾರೆ.
PublicNext
11/09/2021 07:15 am