ದಾವಣಗೆರೆ: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡನನ್ನು ಬರ್ಬರವಾಗಿ ಕೊಂದು ಮಣ್ಣಲ್ಲಿ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಸವಾಪಟ್ಟಣ ಪೊಲೀಸರು ಬಂಧಿಸಿದ್ದಾರೆ.
ಇಸ್ಮಾಯಿಲ್ ಖಾನ್, ಅಮ್ಜದ್ ಖಾನ್ ಹಾಗೂ ನೂರ್ ಅಹ್ಮದ್ ಬಂಧಿತ ಆರೋಪಿಗಳು. ಬೆಸ್ಕಾಂ ಗುತ್ತಿಗೆದಾರ ಹಾಗೂ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮುಖಂಡ ಜೈನುಲ್ಲಾ ಖಾನ್ ಹತ್ಯೆಗೀಡಾದವರು.
ಘಟನೆ ಹಿನ್ನೆಲೆ ಏನು..?
ವಾಕಿಂಗ್‌ಗೆ ಹೋಗಿದ್ದ ಜೈನುಲ್ಲಾ ಖಾನ್ ಅವರು ಸೆಪ್ಟಂಬರ್ 2ರಂದು ದಿಢೀರ್ ನಾಪತ್ತೆಯಾಗಿದ್ದರು. ಎಲ್ಲ ಕಡೆ ಹುಡುಕಿದರೂ ಪತ್ತೆ ಆಗಿರಲಿಲ್ಲ. ಅವರ ಪತ್ನಿ ಸಬ್ರಿನ್ ಬಾನು ಅವರು ಬಸವಾಪಟ್ಟಣ ಪೊಲೀಸರಿಗೆ ತನ್ನ ಪತಿ ಮನೆಗೆ ಬಂದಿಲ್ಲ ಎಂದು ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಬಸವಾಪಟ್ಟಣ ಪೊಲೀಸರು ತನಿಖೆ ಆರಂಭಿಸಿದ್ದರು. ತನ್ನ ಪತ್ನಿ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಅಮ್ಜದ್ ಖಾನ್ ತನ್ನ ಸಹೋದರ ಇಸ್ಮಾಯಿಲ್ ಖಾನ್ ಹಾಗೂ ನೂರ್ ಅಹ್ಮಸದ್ ಜೊತೆ ಸೇರಿಕೊಂಡು ಹಲ್ಲೆ ನಡೆಸಿ ಜೈನುಲ್ಲಾ ಖಾನ್ ಹತ್ಯೆ ಮಾಡಿ ಬಳಿಕ ಮಣ್ಣಲ್ಲಿ ಹೂತು ಹಾಕಿದ್ದರು. ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ಈ ವಿಷಯ ಬಾಯ್ಬಿಟ್ಟಿದ್ದಾರೆ.
ಫೋನ್ ನೆಟ್ವರ್ಕ್ ಆಧರಿಸಿ ಪೊಲೀಸರು ಈ ಪ್ರಕರಣ ಪತ್ತೆ ಹಚ್ಚಿದ್ದಾರೆ. ಇನ್ನು ಜೈನುಲ್ಲಾ ಖಾನ್ ಹಾಗೂ ಆರೋಪಿಗಳ ಮೊಬೈಲ್ ನೆಟ್ವರ್ಕ್ ಸಮೀಪದಲ್ಲಿ ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಸತ್ಯ ಹೊರಬಿದ್ದಿದೆ.
PublicNext
12/09/2021 12:38 pm