ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಕೌಟುಂಬಿಕ ಕಲಹ, ದಂಪತಿ ಆತ್ಮಹತ್ಯೆ

ಚಿತ್ರದುರ್ಗ: ಪತ್ನಿ ಸಾವಿನಿಂದ ನೊಂದ ಪತಿ ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಯಾದಲಗಟ್ಟೆ ಗ್ರಾಮದಲ್ಲಿ ಸೋಮವಾರ ಮುಂಜಾನೆ ನಡೆದಿದೆ.

ಮೃತರನ್ನು ಮಹಾಂತೇಶ (35), ಶೀಲಾ (30) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕೌಟುಂಬಿಕ ಕಲಹವೇ ಕಾರಣ ಎಂದು ತಿಳಿದು ಬಂದಿದೆ.

ಯಾದಲಗಟ್ಟೆ ಗ್ರಾಮದಲ್ಲಿ ಭಾನುವಾರ ರಾತ್ರಿ ಶೀಲಾ‌ ನೇಣು ಹಾಕಿಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಳು. ಪತ್ನಿ ಸಾವಿನಿಂದ ನೊಂದ ಪತಿ ಮಹಾಂತೇಶ ಬೆಳಗಿನ ಜಾವ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಚಳ್ಳಕೆರೆ ತಾಲೂಕಿನ ತಳುಕು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Edited By : Nagaraj Tulugeri
PublicNext

PublicNext

13/09/2021 01:08 pm

Cinque Terre

51.47 K

Cinque Terre

0