ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೌಡಿ ಶೀಟರ್ ಅರವಿಂದ್ ಬರ್ಬರ ಹತ್ಯೆ

ಬೆಂಗಳೂರು: ಅಶೋಕನಗರದ ಫುಟ್ಬಾಲ್ ಸ್ಟೇಡಿಯಂ ಬಳಿ ರೌಡಿಶೀಟರ್ ಅರವಿಂದ್ ಅಲಿಯಾಸ್ ಲೀ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಪುಲಿಕೇಶಿ ನಗರದ ರೌಡಿ ಶೀಟರ್ ಅರವಿಂದ್ ಅಲಿಯಾಸ್ ಲೀ ನನ್ನು ಕೆಲವು ದಿನಗಳ ಹಿಂದೆ ಗೂಂಡಾ ಆಕ್ಟ್ ನಲ್ಲಿ ಭಾರತೀನಗರ ಪೊಲೀಸರು ಜೈಲಿಗೆ ಕಳುಹಿಸಿದ್ದರು.

ಜಾಮೀನಿನ ಮೇಲೆ ಇತ್ತೀಚೆಗೆ ಹೊರಬಂದಿದ್ದ ಈತನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಉಪ ಪೊಲೀಸ್ ಆಯುಕ್ತ (ಕೇಂದ್ರ) ಅನುಚೇತ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಸ್ಥಳೀಯ ಫುಟ್ಬಾಲ್ ತಂಡವನ್ನು ನಿರ್ವಹಿಸುತ್ತಿದ್ದ ರೌಡಿ ಶೀಟರ್ ಅರವಿಂದ್ ಕೆಎಸ್‌ಎಫ್‌ಎ ಫುಟ್ಬಾಲ್ ಕ್ರೀಡಾಂಗಣದ ಎದುರಿನ ಬಿಬಿಎಂಪಿ ಮೈದಾನದಲ್ಲಿ ಪಂದ್ಯಾವಳಿಯಲ್ಲಿ ಆಡಲು ಬಂದಿದ್ದರು. ಸಂಜೆ ಅಪರಿಚಿತ ವ್ಯಕ್ತಿಗಳು ಮಾರಕಾಸ್ತ್ರಗಳನ್ನು ಹಿಡಿದು ಅರವಿಂದ್​​ನನ್ನು ಸುತ್ತು ವರೆದಿದ್ದಾರೆ. ಅಲ್ಲಿಂದ ತಪ್ಪಿಸಿಕೊಂಡು ಓಡಿದ ರೌಡಿ ಶೀಟರ್ ಅರವಿಂದ್ ಕೆಎಸ್‌ಎಫ್‌ಎ ಫುಟ್ಬಾಲ್ ಕ್ರೀಡಾಂಗಣವನ್ನು ಪ್ರವೇಶಿಸಿ ರೆಫರಿಯ ಕೊಠಡಿಯೊಳಗೆ ಹೋಗಿ ಬೀಗ ಹಾಕಿಕೊಂಡಿದ್ದಾನೆ. ಆದರೂ ಬಿಡದ ಆರೋಪಿಗಳು, ಬಾಗಿಲು ಮುರಿದು ಮಾರಕ ಆಯುಧಗಳನ್ನು ಬಳಸಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

Edited By : Nagaraj Tulugeri
PublicNext

PublicNext

13/09/2021 02:39 pm

Cinque Terre

58.67 K

Cinque Terre

2

ಸಂಬಂಧಿತ ಸುದ್ದಿ