ಮುಂಬೈ: ವಾರ್ಧಾ ನದಿಯಲ್ಲಿ ಬೋಟ್ ಮುಳುಗಿ 11 ಮಂದಿ ನೀರುಪಾಲಾಗಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಇಂದು (ಮಂಗಳವಾರ) ನಡೆದಿದೆ.
ಇಲ್ಲಿನ ಗಲೇಗಾಂವ್ ಬಳಿ ದುರ್ಘಟನೆ ಸಂಭವಿಸಿದ್ದು, 3 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಒಂದೇ ಕುಟುಂಬದ ಹನ್ನೊಂದು ಮಂದಿ ಬೆಳಗ್ಗೆ 10 ಗಂಟೆ ಸುಮಾರಿಗೆ, ವಾರ್ಧಾ ನದಿಯ ಮೂಲಕ ಬೋಟ್ನಲ್ಲಿ ಮಹಾದೇವನ ದರ್ಶನಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
PublicNext
14/09/2021 05:25 pm