ನವದೆಹಲಿ: ಪಾಕಿಸ್ತಾನದ ಉಗ್ರರಿಂದ ತರಬೇತಿ ಪಡೆದಿದ್ದ ಒಟ್ಟು ಆರು ಜನರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪಾಕ್ ನಿಯಂತ್ರಿತ ಉಗ್ರ ಸಂಘಟನೆಯ ಜಾಲವನ್ನು ಭೇದಿಸಿದ್ದಾರೆ.
ಆರು ಮಂದಿ ಶಂಕಿತ ಉಗ್ರರನ್ನು ವಶಕ್ಕೆ ಪಡೆಯಲಾಗಿದ್ದು ಹಲವು ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿ ಅಪಾರ ಪ್ರಮಾಣದ ಸ್ಫೋಟಕಗಳು ಹಾಗೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಪ್ರಮೋದ್ ಕುಷ್ವಾಹಾ ಹೇಳಿದ್ದಾರೆ.
ಬಂಧಿತರಾದ ಇವರೆಲ್ಲ ಮುಂಬರುವ ಹಬ್ಬಗಳ ಸಂದರ್ಭಗಳಲ್ಲಿ ದೇಶದ ಹಲವೆಡೆ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಇದೆ. ಈ ಭಯೋತ್ಪಾದಕರಿಗೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಅನೀಸ್ ಇಬ್ರಾಹಿಂ ಆರ್ಥಿಕ ನೆರವು ನೀಡುತ್ತಿರುವುದಾಗಿ ವಿಶೇಷ ತನಿಖಾದಳ ಪೊಲೀಸ್ ಅಧಿಕಾರಿ ನೀರಜ್ ಠಾಕೂರ್ ತಿಳಿಸಿದ್ದಾರೆ.
PublicNext
15/09/2021 07:40 am