ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ವಾರಣಾಸಿ ಫಾರ್ಮ್ ಹೌಸ್ ನಲ್ಲಿ ಕೆರೆಯಲ್ಲಿ ಮುಳುಗಿ ಮಂಗಳೂರಿನ ವೈದ್ಯೆ ಮೈಜಿ ಕರೋಲ್ ಫೆರ್ನಾಂಡೀಸ್ (31) ಸಾವನ್ನಪ್ಪಿದ್ದಾರೆ.
ಮಂಗಳವಾರ ಸಂಜೆ ಘಟನೆ ನಡೆದಿದ್ದು, ಬುಧವಾರ ಬೆಳಗ್ಗೆ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೃಷಿ ಅದ್ಯಯನದ ಬಗ್ಗೆ ಆಸಕ್ತಿಯನ್ನು ಹೊಂದಿದ್ದ ಈಕೆ ಬಂಟ್ವಾಳ ತಾಲೂಕು ಕೇಪು ಗ್ರಾಮದ ವಾರಣಾಸಿ ಪಾರ್ಮ್ ಹೌಸ್ನಲ್ಲಿ ಅಧ್ಯಯನಕ್ಕೆಂದು ತೆರಳಿದ್ದರು. ಸಂಜೆ ಯಾರು ಇಲ್ಲದ ಸಮಯ ಫಾರ್ಮ್ ಹೌಸನಲ್ಲಿದ್ದ ಕೆರೆಯಲ್ಲಿ ಈಜಲು ಹೋಗಿದವರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದ ವೇಳೆ ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದು ಬಳಿಕ ಮಂಗಳೂರಿನ ಪಾದರ್ ಮುಲ್ಲರ ಆಸ್ವತ್ರೆಗೆ ಕರೆದುಕೊಂಡು ಹೋದಾಗ ವೈದ್ಯಾದಿಕಾರಿಯವರು ಪರಿಕ್ಷೀಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
PublicNext
15/09/2021 12:45 pm