ಬಾಗಲಕೋಟೆ: ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಘಟನೆ ಜಿಲ್ಲೆಯ ಬೀಳಗಿ ತಾಲುಕಿನ ತೋಳಮಟ್ಟಿ ಗ್ರಾಮದಲ್ಲಿ ನಡೆದಿದೆ.
ಯಲ್ಲವ್ವ ಯಲ್ಲಪ್ಪ ಮಾದರ (24) ಕೊಲೆಯಾದ ಪತ್ನಿ. ಆರೋಪಿ ಯಲ್ಲಪ್ಪ ಮಾದರ ಪತ್ನಿಯ ಶೀಲ ಶಂಕಿಸಿದ್ದ ಪತಿ ಹತ್ಯೆ ಮಾಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕೊಲೆ ಮಾಡಿದ ಬಳಿಕ ಯಲ್ಲಪ್ಪ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಈ ಸಂಬಂಧ ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
PublicNext
15/09/2021 08:13 pm