ಬೆಂಗಳೂರು: ಇದು ಕರ್ನಾಟಕ ರಾಜ್ಯದ ಅಪರಾಧ ಇತಿಹಾಸದಲ್ಲೇ ಮೊಟ್ಟ ಮೊದಲು ಎನ್ನಬಹುದು. ಮೊದಲ ಬಾರಿಗೆ ಬೆಂಗಳೂರು ಅಪರಾಧ ವಿಭಾಗದ, ಆ್ಯಂಟಿ ನಾರ್ಕೋಟಿಕ್ಸ್ ವಿಭಾಗದ ಅಧಿಕಾರಿಗಳ ತಂಡ ಡ್ರಗ್ಸ್ ತಯಾರಿಕಾ ಘಟಕದ ಮೇಲೆ ದಾಳಿ ಮಾಡಿ ಅಪಾರ ಪ್ರಮಾಣದ ಮಾದಕವಸ್ತು ಮತ್ತು ಅದರ ತಯಾರಿಕೆಗಾಗಿ ಬಳಸಲಾಗುತ್ತಿದ್ದ ರಾಸಾಯನಿಕಗಳನ್ನು ವಶಕ್ಕೆ ಪಡೆದಿದ್ದಾರೆ. ಅಚ್ಚರಿ ಎಂದರೆ ಈ ಖದೀಮರು ಮನೆಯಲ್ಲೇ ನಶೆ ಪದಾರ್ಥ ತಯಾರಿಸಿ ಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿ ದೊರೆತಿದೆ.
ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಾದಕ ದ್ರವ್ಯಗಳನ್ನು ತಯಾರಿಸುತ್ತಿದ್ದ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಅಪಾರ ಪ್ರಮಾಣದ ಮಾದಕವಸ್ತು ಮತ್ತು ಅದರ ತಯಾರಿಕೆಗಾಗಿ ಬಳಸಲಾಗುತ್ತಿದ್ದ ರಾಸಾಯನಿಕಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಅಧಿಕಾರಿಗಳ ಮೂಲಗಳ ಪ್ರಕಾರ ಎಲೆಕ್ಟ್ರಾನಿಕ್ ಸಿಟಿ ಪಕ್ಕದ ಬೆಟ್ಟದಾಸನಪುರದಲ್ಲಿ ವೃದ್ದ ದಂಪತಿಗಳಿಂದ ಮನೆಯನ್ನು ಬಾಡಿಗೆಗೆ ಪಡೆದಿದ್ದ ನೈಜೀರಿಯಾ ಪ್ರಜೆ ಜಾನ್, ತನ್ನ ರಾಸಾಯನಿಕ ಶಿಕ್ಷಣವನ್ನು ದುರುಪಯೋಗ ಪಡಿಸಿಕೊಂಡು ಮನೆಯಲ್ಲೇ ಸಿಂಥೆಟಿಕ್ ಡ್ರಗ್ಸ್ ತಯಾರಿಕೆಯಲ್ಲಿ ತೊಡಗಿದ್ದ, ಇದಕ್ಕೆ ಬೇಕಾಗುವ ಎಲ್ಲ ರೀತಿಯ ರಾಸಾಯನಿಕಗಳನ್ನು ಅಪಾರ ಪ್ರಮಾಣದಲ್ಲಿ ಮನೆಯಲ್ಲಿ ದಾಸ್ತಾನು ಮಾಡಿಟ್ಟಿದ್ದ ಎನ್ನಲಾಗಿದೆ. ಎಲ್ಲ ಸಾಮಗ್ರಿಗಳನ್ನು ಸೀಜ್ ಮಾಡಿದ ಪೊಲೀಸರು ಆರೋಪಿ ಜಾನ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
PublicNext
16/09/2021 03:59 pm