ಬೆಂಗಳೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದ ಮನೆಯೊಂದರಲ್ಲಿ ನಡೆದಿದೆ. ಮತ್ತೊಂದು ಶಾಕಿಂಗ್ ವಿಚಾರವೆಂದರೆ 3 ವರ್ಷದ ಕಂದಮ್ಮ ಮೃತದೇಹಗಳೊಟ್ಟಿಗೆ 5 ದಿನ ಕಳೆದಿದೆ.
ಸ್ಥಳೀಯ ಪತ್ರಿಕೆಯೊಂದರ ಸಂಪಾದಕರ ಶಂಕರ್ ಕುಟುಂಬದ ಸದಸ್ಯರು ಆತ್ಮಹತ್ಯೆ ಮಾಡಿಕೊಂಡವರು. ಒಂಬತ್ತು ತಿಂಗಳು ಮಗುವನ್ನು ಸಾಯಿಸಿ ಬಳಿಕ ಭಾರತಿ (50), ಸಿಂಚನ(33), ಸಿಂಧುರಾಣಿ (30), ಮಧು ಸಾಗರ(27) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತಯಾಗಿವೆ. ಐದು ದಿನದ ಹಿಂದೆಯೆ ಮನೆಯಲ್ಲಿ ಅತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. ಮನೆಯಲ್ಲಿ ಒಟ್ಟು 6 ಮಂದಿ ಇದ್ದರು. ಕಳೆದ ಐದು ದಿನಗಳಿಂದ 3 ವರ್ಷದ ಒಂದು ಮಗು ಮಾತ್ರ ಬದುಕಿತ್ತು. ಆಹಾರವಿಲ್ಲದೆ ಮಗು ನಿತ್ರಾಣವಾಗಿದ್ದು, ಸದ್ಯ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
PublicNext
17/09/2021 08:19 pm