ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅರಣ್ಯಾಧಿಕಾರಿಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನ: ವಿಡಿಯೋ ವೈರಲ್

ಭೂಪಾಲಪಳ್ಳಿ: ಅರಣ್ಯ ಭೂಮಿ ಅತಿಕ್ರಮಣ ಮಾಡಿದ್ದನ್ನು ತೆರವುಗೊಳಿಸಲು ಹೋದ ಅರಣ್ಯಾಧಿಕಾರಿಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಘಟನೆ ನಡೆದಿದೆ.

ತೆಲಂಗಾಣದ ಭೂಪಾಳಪಲ್ಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಈ ಭಾಗದಲ್ಲಿ ಕಳ್ಳ ಬೇಟೆಗಾರರು, ಅಕ್ರಮವಾಗಿ ಅರಣ್ಯ ಸಂಪತ್ತು ಸಾಗಣೆ, ಮರದ ದಿಮ್ಮಿ ಸಾಗಣೆ ಮತ್ತಿತರ ಪರಿಸರ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ ಎನ್ನಲಾಗಿದೆ. ಅರಣ್ಯ ಭೂಮಿ ಒತ್ತುವರಿಯೂ ಆಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ತೆರವು ಕಾರ್ಯಾಚರಣೆಗೆ ಹೋದ ಅರಣ್ಯಾಧಿಕಾರಿಗಳ ಮೈಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಇದರ ವಿಡಿಯೋ ಈಗ ವೈರಲ್ ಆಗುತ್ತಿದೆ.

Edited By : Shivu K
PublicNext

PublicNext

18/09/2021 12:30 pm

Cinque Terre

93.81 K

Cinque Terre

1