ಚಿಕ್ಕಬಳ್ಳಾಪುರ: ಈಗಾಗಲೇ ಪೊಲೀಸ್ ಕಾನ್ ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೇವರಾಜ್ ಎಂಬ ವ್ಯಕ್ತಿಯೂ ತನ್ನ ತಮ್ಮನ ಸಿವಿಲ್ ಪೊಲೀಸ್ ನೇಮಕ ಪರೀಕ್ಷೆ ಬರೆಯಲು ಮುಂದಾಗಿ ಸಿಕ್ಕಿಬಿದ್ದಿದ್ದಾನೆ. ಹೌದು ತಮ್ಮನ ಬದಲಿಗೆ ಪೊಲೀಸ್ ಪರೀಕ್ಷೆ ಬರೆಯಲು ಯತ್ನಿಸಿದ ಕಾನ್ ಸ್ಟೆಬಲ್ ದೇವರಾಜ್ ನನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಕೆಲಸದಿಂದ ವಜಾಗೊಳಿಸಿದ್ದಾರೆ.
ದೇವರಾಜ್ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಕಾನ್ ಸ್ಟೆಬಲ್ ಆಗಿದ್ದರು. 2020ರ ಸೆಪ್ಟೆಂಬರ್ ನಲ್ಲಿ ಯಾದಗಿರಿ ಜಿಲ್ಲೆಯಲ್ಲಿ ನಡೆದ ಸಿವಿಲ್ ಪೊಲೀಸ್ ನೇಮಕ ಪರೀಕ್ಷೆಯಲ್ಲಿ ತನ್ನ ತಮ್ಮ ಮರೆಪ್ಪ ಬದಲಿಗೆ ತಾನೇ ಪರೀಕ್ಷೆ ಬರೆಯುತ್ತಿದ್ದರು. ಕೊಠಡಿ ಪರಿವೀಕ್ಷಕರು ಇವರನ್ನು ಗುರುತಿಸಿದ್ದರು.
ದೇವರಾಜ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಇಲಾಖೆ ವಿಚಾರಣೆಯಲ್ಲಿ ಆರೋಪ ಸಾಬೀತಾದ ಕಾರಣ ಕೆಲಸದಿಂದ ವಜಾಗೊಳಿಸಲಾಗಿದೆ ಎಂದು ಎಸ್ ಪಿ ತಿಳಿಸಿದ್ದಾರೆ.
PublicNext
18/09/2021 10:33 pm