ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಶಿವ ಘರ್ ಧರ್ ಎಂಬಲ್ಲಿ ಮಂಗಳವಾರ ಸೇನಾ ಹೆಲಿಕಾಪ್ಟರ್ ಪತನವಾಗಿದೆ. ಅತಿಯಾದ ಮಂಜು ಇದ್ದಿದ್ದರಿಂದ ಹೆಲಿಕಾಪ್ಟರ್ ಹಾರಾಟಕ್ಕೆ ಕೆಟ್ಟ ವಾತಾವರಣ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಸೇನಾ ಹೆಲಿಕಾಪ್ಟರ್ ಪತನವಾಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಪೈಲಟ್‌ಗಳು ಗಾಯಗೊಂಡಿರುವುದಾಗಿ ವರದಿಯಾಗಿದೆ.
ಹೆಲಿಕಾಪ್ಟರ್ ಪತನಗೊಳ್ಳುತ್ತಿದ್ದಂತೆ ಜೋರಾದ ಸಪ್ಪಳ ಆಗಿದ್ದು, ದಟ್ಟ ಹೊಗೆ ಆವರಿಸಿದೆ. ಕೂಡಲೇ ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ಆರಂಭಿಸಿದೆ. ಸಾವುನೋವಿನ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ ಎಂದು ಉಧಂಪುರ್ ಡಿಐಜಿ ಸುಲೇಮನ್ ಚೌದರಿ ತಿಳಿಸಿದ್ದಾರೆ.
PublicNext
21/09/2021 01:33 pm