ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

25 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಸಾಗಿಸುತ್ತಿದ್ದ ಇಬ್ಬರು ವಿದೇಶಿ ಮಹಿಳೆಯರು ಮುಂಬೈನಲ್ಲಿ ಅರೆಸ್ಟ್!

ಮುಂಬೈ: 25 ಕೋಟಿ ರೂ. ಮೌಲ್ಯದ 5 ಕೆ.ಜಿ ಹೆರಾಯಿನ್ ಡ್ರಗ್ಸ್​​ ಸಾಗಿಸುತ್ತಿದ್ದ ಇಬ್ಬರು ವಿದೇಶಿ ಮಹಿಳೆಯರನ್ನು ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಮಹಿಳೆಯರು ತಮ್ಮ ಬ್ಯಾಗ್​​ಗಳಲ್ಲಿ ಮಾದಕ ದ್ರವ್ಯ​​ಗಳನ್ನು ಅಡಗಿಸಿಟ್ಟು ಸಾಗಿಸುತ್ತಿದ್ದು, ಅದನ್ನು ಕಸ್ಟಮ್ಸ್ ಇಲಾಖೆ ವಶಕ್ಕೆ ಪಡೆದಿದೆ. ಇಬ್ಬರೂ ಮಹಿಳೆಯರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಶಪಡಿಸಿಕೊಂಡಿರುವ ಹೆರಾಯಿನ್​ ಅಂದಾಜು ಮೌಲ್ಯ 25 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

Edited By : Vijay Kumar
PublicNext

PublicNext

22/09/2021 09:10 am

Cinque Terre

64.51 K

Cinque Terre

0

ಸಂಬಂಧಿತ ಸುದ್ದಿ