ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೇಪ್ ಆರೋಪ: ಬೆಂಗಳೂರಿನ ಕ್ಯಾಬ್ ಚಾಲಕ ಅರೆಸ್ಟ್

ಬೆಂಗಳೂರು: ನಗರದ ಎಚ್‌ಎಸ್ಆರ್ ಲೇಔಟ್‌ನಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕ್ಯಾಬ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕ್ಯಾಬ್ ಚಾಲಕನನ್ನು ದೇವರಾಜ್ ಎಂದು ಗುರುತಿಸಲಾಗಿದ್ದು, ಈತ ಆಂಧ್ರ ಮೂಲದವನು. ಬುಧವಾರ ಬೆಳಗ್ಗಿನ ಜಾವ 4 ಗಂಟೆಯ ವೇಳೆ ಘಟನೆ ನಡೆದಿದೆ. ಸದ್ಯ ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ತನ್ನ ಮೇಲೆ ಆತ್ಯಚಾರ ಎಸಗಿದ್ದಾನೆ ಎಂದು ಆರೋಪ ಮಾಡಿರುವ ಯುವತಿ ಜೀವನ್ ಭೀಮಾನಗರದಲ್ಲಿ ಕೆಲಸ ಮಾಡುತ್ತಿದ್ದಾಳೆ. ನಿನ್ನೆ ರಾತ್ರಿ ಪಾರ್ಟಿ ಮುಗಿಸಿಕೊಂಡು ಮನೆಗೆ ತೆರಳಲು ಈಕೆ ಕ್ಯಾಬ್ ಬುಕ್ ಮಾಡಿದ್ದಳಂತೆ. ಹೀಗೆ ಕ್ಯಾಬ್ ಬಂದು ಯುವತಿ ಮುಂದೆ ಬಂದು ನಿಂತಿದ್ದು, ಆಕೆ ಕ್ಯಾಬ್ ಏರಿದ್ದಾಳೆ. ನಂತರ ಆಕೆ ಚಾಲಕನ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದಾಳೆ.

ಇತ್ತ ಕ್ಯಾಬ್ ಚಾಲಕ, ಯುವತಿ ಕುಡಿದ ಮತ್ತಿನಲ್ಲಿದ್ದಳು. ಅರೆಪ್ರೆಜ್ಞೆ ಅವಸ್ಥೆಯಲ್ಲಿದ್ದ ಯುವತಿ, ಮನೆ ಜಾಗ ಬಂದರೂ ಇಳಿಯಲಿಲ್ಲ. ಹೀಗಾಗಿ ಆಕೆಯನ್ನು ಇಳಿಸಲು ಹೋದೆ. ಆಗ ಆಕೆ ನನ್ನ ಮೇಲೆ ಅತ್ಯಾಚಾರದ ಆರೋಪ ಮಾಡಿದ್ದಾಳೆ ಎಂದು ತಿಳಿಸಿದ್ದಾರೆ. ಸದ್ಯ ಘಟನೆ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

Edited By : Nagaraj Tulugeri
PublicNext

PublicNext

22/09/2021 10:18 pm

Cinque Terre

71.45 K

Cinque Terre

0