ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಆಕೆಯ ಕುತ್ತಿಗೆಗೆ ಪತಿ ಚೂರಿ ಇರಿದು ಹತ್ಯೆಗೈದ ಆಘಾತಕಾರಿ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿನಗರದಲ್ಲಿ ನಡೆದಿದೆ.
ಅನ್ನಪೂರ್ಣೇಶ್ವರಿನಗರದ ನಿವಾಸಿ ರೂಪಾ (34) ಕೊಲೆಯಾದವರು. ರಿಯಲ್ ಎಸ್ಟೇಟ್ ಉದ್ಯಮಿ ಕಾಂತರಾಜ್ (39) ಆರೋಪಿ. ಕಾಂತರಾಜ್-ರೂಪಾ ದಂಪತಿಗೆ ಒಬ್ಬ ಮಗನಿದ್ದಾನೆ. ತಂದೆಯ ಕೃತ್ಯಕ್ಕೆ ಬಾಲಕ ಅನಾಥವಾಗಿದ್ದಾನೆ.
ಕಾಂತರಾಜ್ ಪತ್ನಿಯ ಶೀಲ ಶಂಕಿಸಿ ಪ್ರತಿನಿತ್ಯವೂ ಜಗಳ ಮಾಡುತ್ತಿದ್ದ. ಈ ವಿಚಾರವಾಗಿ ದಂಪತಿ ನಡುವೆ ಆಗಾಗ ಮನಸ್ತಾಪ ಉಂಟಾಗುತ್ತಿತ್ತು. ಬುಧವಾರ ಸಂಜೆ 4.30ರಲ್ಲಿ ಕಾಂತರಾಜ್ ಪತ್ನಿಯ ಮೊಬೈಲ್ ಪರಿಶೀಲಿಸಿದಾಗ ಆಕೆ ಬೇರೆ ವ್ಯಕ್ತಿಯೊಂದಿಗೆ ಮಾತನಾಡಿರುವುದು ಕಂಡು ಬಂದಿತ್ತು. ಈ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿತ್ತು. ಈ ವೇಳೆ ಆಕ್ರೋಶಗೊಂಡ ಕಾಂತರಾಜ್ ಅಡುಗೆ ಮನೆಯಲ್ಲಿದ್ದ ಚೂರಿಯಿಂದ ಪತ್ನಿ ರೂಪಾ ಕತ್ತಿಗೆ ಇರಿದು ಹತ್ಯೆಗೈದು ಪರಾರಿಯಾಗಿದ್ದಾನೆ.
ಟ್ಯೂಷನ್‌ಗೆ ಹೋಗಿದ್ದ ಮಗ ಮನೆಗೆ ವಾಪಾಸ್ ಮನೆಗೆ ಬಂದಾಗ ತಾಯಿ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಅಳಲು ಆರಂಭಿಸಿದ್ದಾನೆ. ಈ ಬಗ್ಗೆ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಅನ್ನಪೂಣೇಶ್ವರಿನಗರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಕಾಂತರಾಜ್ ತಲೆಮರಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಬಲಿ ಬೀಸಿದ್ದಾರೆ.
PublicNext
23/09/2021 07:25 am