ಕಾನ್ಪುರ (ಉತ್ತರ ಪ್ರದೇಶ): 19 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿದ ರಕ್ಕಸ ಕಾಮುಕ ನಂತರ ಆಕೆಯನ್ನು 10 ನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ್ದಾನೆ.
ಉತ್ತರ ಪ್ರದೇಶದ ಕಾನ್ಪುರ ಸಮೀಪದ ಕಲ್ಯಾಣಪುರ ಎಂಬಲ್ಲಿ ಈ ಘಟನೆ ನಡೆದಿದೆ. ಕಚೇರಿ ಕೆಲಸಕ್ಕಾಗಿ ತನ್ನ ಫ್ಲ್ಯಾಟ್ ಗೆ ಯುವತಿಯನ್ನು ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ತನ್ನೊಂದಿಗೆ ದೈಹಿಕ ಸಂಪರ್ಕ ನಡೆಸಿದರೆ ನಿನಗೆ ಹಣ ನೀಡುತ್ತೇನೆ ಎಂಬುದಾಗಿ ಆಮಿಷ ಒಡ್ಡಿದ್ದಾನೆ. ಇದಕ್ಕೆ ಒಪ್ಪದ ಯುವತಿ ಮೇಲೆ ಆತ ಅತ್ಯಾಚಾರ ಎಸಗಿದ್ದಾನೆ ಹಾಗೂ ತನ್ನ 10 ನೇ ಮಹಡಿಯ ಫ್ಲ್ಯಾಟ್ ನಿಂದ ಆಕೆಯನ್ನು ಬಿಸಾಕಿದ್ದಾನೆ. ಪರಿಣಾಮ ಸಂತ್ರಸ್ತ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಈ ಘಟನೆ ನಂತರ ಆರೋಪಿಯು ಪೊಲೀಸರ ಮುಂದೆ ಕತೆ ಕಟ್ಟಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದಾಗ ಈ ಎಲ್ಲ ಸತ್ಯ ಬೆಳಕಿಗೆ ಬಂದಿದೆ. ಪೊಲೀಸರು ಆರೋಪಿ ಕಾಮುಕನನ್ನು ಅರೆಸ್ಟ್ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
PublicNext
24/09/2021 05:37 pm