ಬೆಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದ ವಿದೇಶಿ ಪ್ರಜೆಯನ್ನು ಬೆಂಗಳೂರಿನ ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದೋಸೊ ಖಲೀಫಾ ಬಂಧಿತ ಆರೋಪಿಯಾಗಿದ್ದು, ಮೂಲ ಐವರಿಕೋಸ್ಟ್ ದೇಶದವನು ಎಂದು ಹೇಳಲಾಗಿದೆ.
ಇನ್ನು ಆರೋಪಿ ಹೆಚ್ ಬಿಆರ್ ಲೇಔಟ್ ನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿರವ ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೆ 2.5 ಕೋಟಿ ಮೌಲ್ಯದ ಎಂಎಡಿಎಂ ಕ್ರಿಸ್ಟಲ್ ಪೌಡರ್ ಜಪ್ತಿ ಮಾಡಿಕೊಳ್ಳಲಾಗಿದ್ದು, ಯಾರಿಗೂ ಅನುಮಾನ ಬಾರದಂತೆ ಶಾಂಪೇನ್ ಬಾಟಲ್ಗಳಲ್ಲಿ ಆರೋಪಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಎಂದು ಹೇಳಲಾಗಿದೆ. ಈ ಘಟನೆಗೆ ಸಂಬಂಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
PublicNext
24/09/2021 05:52 pm