ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಜಕ್ಕಲಮಡುಗು ಜಲಾಶಯದಲ್ಲಿ ಮುಳುಗಿ ಬೆಂಗಳೂರು ಮೂಲದ ಯುವ ಟೆಕ್ಕಿ ಇಂದು ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಸಂಕದಕಟ್ಟೆ ನಿವಾಸಿ ರೋಹಿತ್ ಮೃತ ಯುವಕ. ವಾರಾಂತ್ಯದ ಹಿನ್ನೆಲೆಯಲ್ಲಿ ರೋಹಿತ್ ಐದು ಮಂದಿ ಸ್ನೇಹಿತರೊಂದಿಗೆ ಬೆಂಗಳೂರಿನಿಂದ ಜಕ್ಕಲಮಡುಗು ಜಲಾಶಯಕ್ಕೆ ಹೋಗಿದ್ದರು ಎನ್ನಲಾಗಿದೆ. ಜಲಾಶಯದಲ್ಲಿ ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಆಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿ ರೋಹಿತ್ ಮೃತದೇಹವನ್ನು ಪತ್ತೆ ಮಾಡಿ ಹೊರ ತೆಗೆದಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
PublicNext
25/09/2021 03:45 pm