ಹೈದರಾಬಾದ್: ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಹೈದರಾಬಾದ್ ಆರ್ ಜಿ ಐ ವಿಮಾನನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಸೌದಿಯ ರಿಯಾದ್ ನಿಂದ ಆಂಧ್ರಪ್ರದೇಶಕ್ಕೆ ಪ್ರಯಾಣಿಸುತ್ತಿದ್ದ. ಒಟ್ಟು 768.66 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು ಅದರ ಒಟ್ಟು ಮೌಲ್ಯ 34.24 ಲಕ್ಷ ರೂ.
ಆರೋಪಿ ಚಾಕಲೇಟು ಬಿಸ್ಕತ್ತು ಬಾಕ್ಸ್ ನಲ್ಲಿ ಚಿನ್ನ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕಸ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.
PublicNext
28/09/2021 11:59 am