ಗದಗ: ಸಾಲಬಾಧೆ ತಾಳದೇ ತಾಯಿಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ನದಿಗೆ ಹಾರಿದ್ದಾಳೆ. ಈ ವೇಳೆ ಇಬ್ಬರು ಮಕ್ಕಳು ಭಯದಿಂದ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದ್ರೆ ಮಗು ಮತ್ತು ತಾಯಿ ಮೃತಪಟ್ಟಿದ್ದಾರೆ. ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದ ಮಲಪ್ರಭಾ ನದಿಯಲ್ಲಿ ಈ ದುರ್ಘಟನೆ ನಡೆದಿದೆ. ಮೃತಪಟ್ಟ ತಾಯಿಯನ್ನು ಉಮಾದೇವಿ ಎಂದು ಗುರುತಿಸಲಾಗಿದೆ. ತಾಯಿಯೊಂದಿಗೆ ಎಂಟು ವರ್ಷದ ಮಗಳು ಕೂಡ ನೀರು ಪಾಲಾಗಿದ್ದಾಳೆ.
ಸುಮಾರು 20 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದು, ಆತ್ಮಹತ್ಯೆ ಯತ್ನದಲ್ಲಿ ತಾಯಿ ಮತ್ತು ಮಗಳು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಅದೃಷ್ಟಾವಶತ್ ಅಪಾಯದಿಂದ ಪಾರಾಗಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಉಮಾದೇವಿ ಎಂದು ಗುರುತಿಸಲಾಗಿದೆ. ಕಳೆದ 3 ತಿಂಗಳ ಹಿಂದೆ ಉಮಾದೇವಿ ಅವರ ಪತಿ ಕೋವಿಡ್ ನಿಂದ ಮೃತಪಟ್ಟಿದ್ದರು. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
29/09/2021 09:02 am