ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಬ್ಬರು ಮಕ್ಕಳು, ಪುಟ್ಟ ಸೊಸೆ, ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪಾಪಿ.!

ಚಂಡೀಗಡ: ವ್ಯಕ್ತಿಯೋರ್ವ ತನ್ನ ಇಬ್ಬರು ಮಕ್ಕಳ, ಪತ್ನಿ ಹಾಗೂ ಪುಟ್ಟ ಸೊಸೆಗೆ ವಿಷ ಉಣಿಸಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಹರ್ಯಾಣದ ಪಲ್ವಾಲ್ ಜಿಲ್ಲೆಯ ಔರಂಗಾಬಾದ್ ಗ್ರಾಮದಲ್ಲಿ ನಡೆದಿದೆ.

33 ವ್ಯಕ್ತಿಯು ಬುಧವಾರ ರಾತ್ರಿ ಪತ್ನಿ, 11 ವರ್ಷದ ಮಗ, 7 ವರ್ಷದ ಮಗಳು ಹಾಗೂ 9 ವರ್ಷದ ಸೊಸೆಗೆ ವಿಷ ಕುಡಿಸಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಳಗ್ಗೆ ಮನೆಯಿಂದ ಯಾರೂ ಹೊರಗೆ ಬಾರದ ಹಿನ್ನೆಲೆಯಲ್ಲಿ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಡೆತ್‌ನೋಟ್ ಸೇರಿದಂತೆ ಸಾವಿಗೆ ಕಾರಣ ಏನು ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.

ಮರಣೋತ್ತರ ಪರೀಕ್ಷೆಗಾಗಿ ಪೊಲೀಸರು ಮೃತದೇಹಗಳನ್ನು ಪಲ್ವಾಲ್ ಸಿವಿಲ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪಲ್ವಾಲ್ ಜಿಲ್ಲೆಯ ಪೊಲೀಸರು, ತನಿಖೆ ಆರಂಭಿಸಿದ್ದಾರೆ.

Edited By : Vijay Kumar
PublicNext

PublicNext

29/09/2021 04:31 pm

Cinque Terre

43.46 K

Cinque Terre

0

ಸಂಬಂಧಿತ ಸುದ್ದಿ