ಬೆಂಗಳೂರು : ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಡೆತ್ ನೋಟ್ ಬರೆದಿಟ್ಟು ಬೆಂಗಳೂರಿನ ಹೊರವಲಯದಲ್ಲಿ ಅಪಾರ್ಟ್ ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕುಂಬಳಗೋಡಿನ ದೊಡ್ಡಬೆಲೆಯ ಸನ್ ವರ್ತ್ ಅಪಾರ್ಟ್ ಮೆಂಟ್ ನಲ್ಲಿ ಆತ್ಮಹತ್ಯೆ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾಳೆ. ಜೊತೆಗೆ ತನ್ನ ತಂದೆ ತಾಯಿಗೆ ಕ್ಷಮೆ ಕೇಳಿದ್ದಾಳೆ.
ಕೊಡಗು ಜಿಲ್ಲೆ ಕುಶಾಲನಗರ ಮೂಲದ ಸೌಜನ್ಯಾ(25) ಚೌಕಟ್ಟು, ಫನ್ ಸಿನಿಮಾದಲ್ಲಿ ನಟಿಸಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
30/09/2021 01:18 pm