ಹೈದರಾಬಾದ್: ಪ್ರೀತಿಸಿದ ಗೆಳೆಯ ಕೈ ಕೊಟ್ಟಿದ್ದಕ್ಕೆ ಮನನೊಂದು ತೆಲುಗು ಚಿತ್ರರಂಗದ ಜ್ಯೂನಿಯರ್ ಕಲಾವಿದೆ ಅನುರಾಧ (22) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹೈದರಾಬಾದ್‌ನ ಬಂಜಾರಹಿಲ್ಸ್ನ ಫಿಲ್ಮ್ ನಗರದ ಬಾಡಿಗೆ ಮನೆಯಲ್ಲಿ ಅನುರಾಧ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಕಷ್ಟು ಸಿನಿಮಾಗಳಲ್ಲಿ ಸಹ ಕಲಾವಿದೆಯಾಗಿ ನಟಿಸಿದ್ದ ಅನುರಾಧ, ಜೊತೆಗೆ ಕೆಲಸ ಮಾಡುತ್ತಿದ್ದ ಕಿರಣ್ ಎಂಬುವರನ್ನು ಕಳೆದ ಆರು ವರ್ಷಗಳಿಂದ ಪ್ರೀತಿಸುತ್ತಿದ್ದಳು. ಇಬ್ಬರು ಮದುವೆ ಮಾಡಿಕೊಳ್ಳಬೇಕೆಂದು ನಿರ್ಧರಿಸಿದ್ದರು. ಹೀಗಾಗಿ ಕಳೆದ ಮೂರು ತಿಂಗಳಿಂದ ಇಬ್ಬರು ಒಟ್ಟಿಗೆ ಜೀವನ ನಡೆಸುತ್ತಿದ್ದರು. ಆದರೆ ಕಳೆದ ಕೆಲ ದಿನಗಳ ಹಿಂದೆ ಕಿರಣ್, ಅನುರಾಧಾ ಜೊತೆಗಿನ ಸಂಬಂಧ ಕಡಿದುಕೊಂಡಿದ್ದ. ಇದರಿಂದಾಗಿ ಆಕೆ ಮಾನಸಿಕ ಖಿನ್ನತೆಗೊಳಗಾಗಿದ್ದರು ಎಂದು ತಿಳಿದು ಬಂದಿದೆ.
ಮಂಗಳವಾರ ರಾತ್ರಿ ಅನುರಾಧಾ ಮನೆ ಕೊಠಡಿಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂದು ಆಕೆಯ ವಾಸವಾಗಿದ್ದ ಕೋಣೆಯಿಂದ ದುರ್ವಾಸನೆ ಬರಲು ಶುರುವಾಗಿದ್ದು, ಪಕ್ಕದ ಮನೆಯವರು ನೀಡಿರುವ ಮಾಹಿತಿ ಆಧಾರದ ಮೇಲೆ ಪೊಲೀಸರು ಸ್ಥಳಕ್ಕಾಗಮಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ನಟಿ ಅನುರಾಧ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಸಿಲ್ಲಿಂಗ್ ಫ್ಯಾನ್‌ಗೆ ನೇತಾಡುತ್ತಿತ್ತು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
PublicNext
30/09/2021 06:14 pm