ಚಿಕ್ಕಮಗಳೂರು: ಭದ್ರಾ ವನ್ಯಜೀವಿ ವಿಭಾಗದ ಸಿಬ್ಬಂದಿಗಳ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕಿನ ಮುತ್ತೋಡಿ ಸಮೀಪದ ಹೊನ್ನಾಳದಲ್ಲಿ ಈ ಘಟನೆ ನಡೆದಿದೆ.
ಮದ್ಯ ಸೇವಿಸಿ ರಸ್ತೆ ಮಧ್ಯೆ ಬೊಲೆರೋ ವಾಹನ ನಿಲ್ಲಿಸಿಕೊಂಡು ಕಿಡಿಗೇಡಿಗಳು ಮೋಜು ಮಸ್ತಿ ಮಾಡುತ್ತಿದ್ದರು. ಇದನ್ನು ಪ್ರಶ್ನೆ ಮಾಡಿದ ಸಿಬ್ಬಂದಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಉಪ ವಲಯ ಅರಣ್ಯಾಧಿಕಾರಿ ರಂಗಸ್ವಾಮಿ, ಅರಣ್ಯ ರಕ್ಷಕ ಮಂಜುನಾಥ್ ಮೇಲೆ ಹಲ್ಲೆ ಮಾಡಿದ ಕಿಡಿಗೇಡಿಗಳು ನಂತರ ಅಲ್ಲಿಂದ ಪರಾರಿಯಾಗಿದ್ದಾರೆ. ಮಲ್ಲಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
PublicNext
01/10/2021 09:51 am