ಬೆಂಗಳೂರು: ನನ್ನ ಮಗಳ ಸಾವಿಗೆ ನಟ ವಿವೇಕ್ ಹಾಗೂ ಮಹೇಶ್ ಕಿರುಕುಳವೇ ಕಾರಣ ಎಂದು ನಟಿ ಸೌಜನ್ಯಮಾದಪ್ಪ ತಂದೆ ಪ್ರಭುಮಾದಪ್ಪ ಸಂಕ್ಷಿಪ್ತವಾಗಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ನನ್ನ ಮಗಳು ಸೌಜನ್ಯ ಮಾದಪ್ಪ ಸಿನಿಮಾ ಹಾಗೂ ಧಾರವಾಹಿಗಳಲ್ಲಿ ನಟಿಸುವ ಸಲುವಾಗಿ 5 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿದ್ದಳು ಒಂದು ವರ್ಷದ ಹಿಂದೆ ಕುಂಬಳಗೋಡು ಬಳಿಯ ಸನ್ವರ್ಥ್ ಅಪಾರ್ಟ್ಮೆಂಟ್ ನಲ್ಲಿ ವಾಸವಾಗಿದ್ದಳು ಈ ವೇಳೆ ನನ್ನ ಮಗಳು ಸೌಜನ್ಯಾಳಿಗೆ ವಿವೇಕ್ ಎಂಬುವವನ ಪರಿಚಯವಾಗಿತ್ತು ವಿವೇಕ್ ನನ್ನ ಮಗಳನ್ನ ಪ್ರೀತಿಸುತ್ತೇನೆ, ನಿನ್ನನ್ನೇ ಮದುವೆಯಾಗುತ್ತೇನೆಂದು ಪೀಡಿಸುತ್ತಿದ್ದ.ಈ ವಿಚಾರವನ್ನ ನನ್ನ ಮಗಳು ನನ್ನ ಪತ್ನಿ ರೇಣುಕಾಳಿಗೆ ತಿಳಿಸಿದ್ದಳು .
ಅಲ್ಲದೇ ವಿವೇಕ್ ನನ್ನ ಪತ್ನಿ ರೇಣುಕಾಗೆ ಪೋನ್ ಕರೆ ಮಾಡಿ ನಿನ್ನ ಮಗಳು ನನ್ನನ್ನು ಮದುವೆಯಾಗದಿದ್ದರೆ ಅವಳನ್ನ ಹೊಡೆದು ಸಾಯಿಸುತ್ತೇನೆಂದು ಬೆದರಿಕೆ ಹಾಕಿದ್ದಾನೆ.ಇದಾದ ಒಂದು ಘಂಟೆ ನಂತರ ನನ್ನ ದೊಡ್ಡಮಗಳು ಭಾಗ್ಯಶ್ರೀ ಕರೆಮಾಡಿ ಸೌಜನ್ಯ ಸತ್ತು ಹೋಗಿದ್ದಾಳೆ ಎಂದು ತಿಳಿಸಿರುತ್ತಾಳೆ.
ನನ್ನ ಮಗಳ ಸಾವಿಗೆ ವಿವೇಕ್ ಹಾಗೂ ಅವಳ ಸಹಾಯಕನಾಗಿದ್ದ ಮಹೇಶ್ ಕಾರಣ ನನ್ನ ಮಗಳ ಬಳಿ 6 ಲಕ್ಷ ಹಣವಿತ್ತು
ಎರಡು ದಿನಗಳ ಹಿಂದೆ 1 ಲಕ್ಷ ಹಣವನ್ನು ಕಳುಹಿಸಿರುತ್ತೇನೆ ನನ್ನ ಮಗಳ ಜೊತೆಯಲ್ಲಿದ್ದ ಮಹೇಶ್ ಹಾಗೂ ವಿವೇಕ್ ಕಿರುಕುಳ ತಾಳಲಾರದೇ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ.ವಿವೇಕ್ ಹಾಗೂ ಮಹೇಶ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ನಟಿಯ ತಂದೆ ಗೋಗರೆದಿದ್ದಾರೆ.
PublicNext
01/10/2021 12:09 pm