ಬಾಗಲಕೋಟೆ : ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಬಾಗಲಕೋಟೆ ಜಿಲ್ಲೆ ಕೊಟ್ನಳ್ಳಿ ಗ್ರಾಮದಲ್ಲಿ ಘಟನೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕೊಟ್ನಳ್ಳಿ ಗ್ರಾಮದ ಬಳಿ ಮಲಪ್ರಭಾ ನದಿಯಲ್ಲಿ ಈ ಘಟನೆ ನಡೆದಿದ್ದು ಮಲ್ಲಪ್ಪ (11) ಮತ್ತು ಮನೋಜ್ (10) ಮೃತ ಶಾಲಾ ಬಾಲಕರು. ಇನ್ನು ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೋಲಿಸರು ಸ್ಥಳೀಯರ ನೆರವಿನೊಂದಿಗೆ ನದಿಯಿಂದ ಮಕ್ಕಳನ್ನು ಹೊರತೆಗೆದಿದ್ದಾರೆ.
ಸ್ಥಳದಲ್ಲಿ ಪಾಲಕರ ಆಕ್ರಂದನ ಮುಗಿಲು ಮುಟ್ಟಿದೆ ಗುಳೇದಗುಡ್ಡ ಪೋಲಿಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
01/10/2021 03:52 pm