ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಯೂಟ್ಯೂಬ್ ನೋಡಿ ಬೈಕ್ ಕಳ್ಳತನ ಮಾಡ್ತಿದ್ದ ಗ್ಯಾಂಗ್ ಅರೆಸ್ಟ್

ಬೆಂಗಳೂರು : ಆಧುನಿಕತೆ ಬೆಳೆದಂತೆ ಎಲ್ಲವೂ ಬದಲಾಗುತ್ತಿದೆ. ಸದ್ಯ ಎಲ್ಲರ ಕೈಯಲ್ಲೂ ಮೊಬೈಲ್ ತಂತ್ರಜ್ಞಾನದ ತಿಳುವಳಿಕೆ ಇರುವ ಪ್ರತೊಯೊಬ್ಬರು ಏನಾದರೂ ಒಂದು ಮಾಡುತ್ತಲೇ ಇರುತ್ತಾರೆ.

ಸದ್ಯ ಇಲ್ಲೊಂದು ಗ್ಯಾಂಗ್ ಯೂಟ್ಯೂಬ್ ನೋಡಿ ಬೈಕ್ ಕಳ್ಳತನ ಮಾಡುವುದನ್ನು ಕಾಯಕವನ್ನಾಗಿಸಿಕೊಂಡಿತ್ತು. ಬೈಕ್ ಹ್ಯಾಂಡ್ ಲಾಕ್ ಮುರಿದು ಕ್ಷಣ ಮಾತ್ರದಲ್ಲಿ ಕಳ್ಳತನ ಮಾಡುತ್ತಿದ್ದ ಈ ಖದೀಮರು ತಲೆನೋವಾಗಿ ಪರಿಣಮಿಸಿದ್ದರು.

ಹೌದು ಬ್ಯಾಟರಾಯನಪುರ, ಹಲಸೂರುಗೇಟ್ ಠಾಣಾ ವ್ಯಾಪ್ತಿಯಲ್ಲಿ ಮನೆ ಮುಂಭಾಗದ ರಸ್ತೆಯಲ್ಲಿ ಪಾರ್ಕ್ ಮಾಡೋ ಬೈಕ್ ಗಳನ್ನು ಟಾರ್ಗೆಟ್ ಮಾಡುವ ಇವರು ಬೈಕ್ ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸದ್ಯ ಪೊಲೀಸರ ಅತಿಥಿಗಳಾಗಿರುವ ಈ ಕಳ್ಳರ ಗ್ಯಾಂಗ್ ತಾವು ಯೂಟ್ಯೂಬ್ ನಲ್ಲಿ ಸರ್ಚ್ ಮಾಡಿ ಕಳ್ಳತನದ ಪ್ಲ್ಯಾನ ಮಾಡುತ್ತಿರುವುದಾಗಿ ಬಾಯಿ ಬಿಟ್ಟಿದ್ದಾರೆ. ಹಲಸೂರು ಗೇಟ್ ಪೊಲೀಸರಿಂದ ಮೂವರು ಬೈಕ್ ಕಳ್ಳರ ಬಂಧನವಾಗಿದೆ. ಬಂಧಿತರಿಂದ ಕಳುವಾಗಿದ್ದ 8 ಬೈಕ್ ಗಳು ವಶಕ್ಕೆ ಪಡೆಯಲಾಗಿದ್ದು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Shivu K
PublicNext

PublicNext

02/10/2021 01:54 pm

Cinque Terre

80.55 K

Cinque Terre

0