ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗಾಂಜಾ ಸಾಗಿಸಲು ರೆಡಿಯಾಗಿದ್ದ ಸ್ವಿಗ್ಗಿ ಬಾಯ್ ಪೊಲೀಸ್ ವಶಕ್ಕೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಾದಕ ವಸ್ತು ಜಾಲವನ್ನು ಹೆಡೆಮುರಿ ಕಟ್ಟಲು ಪೊಲೀಸರು ಹಗಲು-ರಾತ್ರಿ ಶ್ರಮಿಸುತ್ತಾರೆ. ಆದರೂ ನಡುನಡುವೆ ಮಾದಕ ಮಾನವರು ಸಿಕ್ಕಿ ಬೀಳುತ್ತಿದ್ದಾರೆ. ಅದರಂತೆ ಇಂದು ಸ್ವಿಗ್ಗಿ ಡೆಲಿವರಿ ಬಾಯ್ ಕೂಡ ಸಿಕ್ಕಿಬಿದ್ದಿದ್ದಾನೆ. ಈ ಪ್ರಕರಣದಲ್ಲಿ ಕಿಂಗ್​ಪಿನ್ ಸೇರಿ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ವಲಯ ಎನ್ಸಿಬಿ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಗಾಂಜಾ ಪೂರೈಕೆ ಮಾಡಲು ಸಿದ್ಧವಾಗಿದ್ದ ಸ್ವಿಗ್ಗಿ ಡೆಲಿವರಿ ಬಾಯ್ ಸೇರಿದಂತೆ ಆರೋಪಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ನಾಲ್ವರನ್ನು ವಶಪಡಿಸಿಕೊಳ್ಳಲಾಗಿದೆ.

ಕಾರಿನಲ್ಲಿ 8 ಬಾಕ್ಸ್ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಸೆಪ್ಟೆಂಬರ್ 30ರಂದು ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು. ಈ ವೇಳೆ 137 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿತ್ತು. ಬಂಧಿತರ ಮನೆ ಪರಿಶೀಲನೆ ನಡೆಸಿದಾಗ ಅಲ್ಲಿಯೂ 4.81 ಲಕ್ಷ ಹಣ ಹಾಗೂ 3 ಕೆಜಿ ಗಾಂಜಾ ಪತ್ತೆಯಾಗಿದೆ. ಆರೋಪಿಗಳು ಸ್ವಿಗ್ಗಿ ಡೆಲಿವರಿ ಬಾಯ್ಸ್ ಮೂಲಕ ಗಾಂಜಾ ಸರಬರಾಜು ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಬಂಧಿತರಿಂದ ಒಟ್ಟು 5.20 ಲಕ್ಷ ರೂಪಾಯಿ ಮೌಲ್ಯದ 140 ಕೆಜಿ‌ ಗಾಂಜಾ ಜಪ್ತಿ ಮಾಡಲಾಗಿದೆ.

Edited By : Nagaraj Tulugeri
PublicNext

PublicNext

02/10/2021 10:08 pm

Cinque Terre

67.55 K

Cinque Terre

1

ಸಂಬಂಧಿತ ಸುದ್ದಿ