ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ: ಸ್ಟಾರ್ ನಟನ ಪುತ್ರ ಸೇರಿ ಹತ್ತು ಮಂದಿ ಬಂಧನ

ಮುಂಬೈ: ಚಲಿಸುತ್ತಿದ್ದ ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡುತ್ತಿದ್ದ ಬಾಲಿವುಡ್ ಸ್ಟಾರ್ ನಟನ ಪುತ್ರ ಸೇರಿದಂತೆ ಒಟ್ಟು ಹತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಹಡಗು ಮುಂಬೈನಿಂದ ಗೋವಾಕ್ಕೆ ಹೊರಟಿತ್ತು ಎಂಬ ಮಾಹಿತಿ ಇದೆ

ಮುಂಬೈ ಸಮುದ್ರದ ಮಧ್ಯದಲ್ಲಿ ಚಲಿಸುತ್ತಿರುವ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಎನ್‍ಸಿಬಿ ಅಧಿಕಾರಿಗಳು ಐಷಾರಾಮಿ ಹಡಗಿನ ಮೇಲೆ ದಾಳಿ ನಡೆಸಿದ್ದಾರೆ. ಡ್ರಗ್ಸ್ ರೇವ್ ಪಾರ್ಟಿ ಮಾಡುತ್ತಿದ್ದ ಸ್ಟಾರ್ ನಟನ ಮಗ ಸೇರಿ ಒಟ್ಟು 10 ಮಂದಿಯನ್ನು ಎನ್‍ಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಕೊಕೇನ್, ಎನ್‍ಡಿಎಂ, ಹಾಶಿಶ್ ಮಾದಕ ದ್ರವ್ಯಗಳನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Edited By : Nagaraj Tulugeri
PublicNext

PublicNext

03/10/2021 08:17 am

Cinque Terre

65.93 K

Cinque Terre

22

ಸಂಬಂಧಿತ ಸುದ್ದಿ