ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾಯಲ್ಲಿ ಹೃದಯ ವಿದ್ರಾವಕ ಘಟನೆ: ವಿಷಾಹಾರ ಸೇವಿಸಿ ತಾಯಿ-ಮಗ ಸಾವು

ಬೆಳಗಾವಿ: ವಿಷಾಹಾರ ಸೇವಿಸಿ ತಾಯಿ ಹಾಗೂ ಮಗ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಹುದಲಿಯಲ್ಲಿ ನಡೆದಿದೆ.

ಪಾರ್ವತಿ ಮಳಗಲಿ(53) ಹಾಗೂ ಸೋಮನಿಂಗಪ್ಪ ಮಳಗಲಿ(28) ಮೃತ ತಾಯಿ-ಮಗ. ಭಾನುವಾರ ತಡರಾತ್ರಿ ಇಬ್ಬರೂ ಸಾವನ್ನಪ್ಪಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಪಾರ್ವತಿ ಹಾಗೂ ಸೋಮನಿಂಗಪ್ಪ ಅವರು ಭಾನುವಾರ ಹೊಲದ ಕೆಲಸಕ್ಕೆಂದು ತೆರಳಿದ್ದರು. ಸಂಜೆ ವೇಳೆಗೆ ಕೆಲಸ ಮುಗಿಸಿ ಮನೆಗೆ ಮರಳಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಭಜ್ಜಿ ಸೇವಿಸಿದ ಕೆಲ ಹೊತ್ತಿನ ಬಳಿಕ ಅಸ್ವಸ್ಥರಾಗಿದ್ದಾರೆ. ತಕ್ಷಣವೇ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಅಸುನೀಗಿದ್ದಾರೆ. ಬಳಿಕ ನಿನ್ನೆ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ಮಾಡಲಾಗಿದೆ.

Edited By : Vijay Kumar
PublicNext

PublicNext

05/10/2021 01:58 pm

Cinque Terre

67.15 K

Cinque Terre

1