ಬೆಳಗಾವಿ : ಕೊರೊನಾದಿಂದ ಮಕ್ಕಳ ಶಿಕ್ಷಣದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಆನ್ ಲೈನ್ ಶಿಕ್ಷಣಕ್ಕೆ ಚಿಣ್ಣರು ಕ್ರಮೇಣ ಒಗ್ಗುತ್ತಿದ್ದಾರೆ. ಸದ್ಯ ಆನ್ ಲೈನ್ ಜೊತೆಗೆನೆ ಶಾಲೆಗೆ ಬರುವಂತೆ ಮಕ್ಕಳಿಗೆ ಸರ್ಕಾರ ಸೂಚಿಸಿದೆ.
ಈ ಹಿನ್ನೆಲೆಯಲ್ಲಿ ಮಕ್ಕಳು ಮರಳಿ ಶಾಲೆಯತ್ತ ಮುಖ ಮಾಡಿದ್ದಾರೆ. ಆದರೆ ಇನ್ನು ಕೆಲ ಮಕ್ಕಳು ಮನೆಯ ವಾತಾವರಣಕ್ಕೆ ಹೊಂದಿಕೊಂಡಿದ್ದು ಮರಳಿ ಶಾಲೆ ಹೋಗಲು ನಿರಾಕರಿಸುತ್ತಿದ್ದಾರೆ. ಸದ್ಯ ಬೆಳಗಾವಿಯ ಕಸಾಯಿ ಗಲ್ಲಿಯಲ್ಲಿ ಶಾಲೆಗೆ ಹೋಗು ಎಂದಿದ್ದಕ್ಕೆ 13 ವರ್ಷದ ಶಾಹೀದ್ ಶೇಖ್ ಎಂಬ ಬಾಲಕ ಕುಣಿಕೆಗೆ ಕೊರಳೊಡ್ಡಿದ್ದಾನೆ.
ನಗರದ ಖಾಸಗಿ ಶಾಲೆಯಲ್ಲಿ ಆಂಗ್ಲ ಮಾಧ್ಯಮದಲ್ಲಿ ಓದುತ್ತಿದ್ದ ಈತ ಶಾಲೆ ಆರಂಭವಾದ ಹಿನ್ನೆಲೆಯಲ್ಲಿ ಪಾಲಕರು ಶಾಲೆಗೆ ಹೋಗುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಮಾರ್ಕೆಟ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
PublicNext
05/10/2021 05:40 pm