ಹಾಸನ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೃದ್ಧನೋರ್ವ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬನವಾಸೆ ಗ್ರಾಮದಲ್ಲಿ ನಡೆದಿದೆ.
ಬಸವಲಿಂಗಪ್ಪ(71) ಆತ್ಮಹತ್ಯೆಗೆ ಶರಣಾದ ವೃದ್ಧ.ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಸವಲಿಂಗಪ್ಪ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಸವಲಿಂಗಪ್ಪ ಕೆಲವು ವರ್ಷಗಳಿಂದ ಖಿನ್ನತೆಗೆ ಒಳಗಾಗಿದ್ದರು. ಇವರ ಪತ್ನಿ ಹಾಗೂ ಪುತ್ರ ವಿದೇಶದಲ್ಲಿದ್ದಾರೆ. ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
08/10/2021 07:34 am