ಮುಂಬೈ: ಲಕ್ನೋದಿಂದ ಮುಂಬೈಗೆ ರೈಲಿನಲ್ಲಿ ತೆರಳುತ್ತಿದ್ದ 20 ವರ್ಷದ ಯುವತಿಯ ಮೇಲೆ 8 ಜನ ದರೋಡೆಕೋರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ರೈಲ್ವೇ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಉಳಿದವರಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಆರೋಪಿಗಳು ಸ್ಲೀಪರ್ ಕೋಚ್ ಪ್ರಯಾಣಿಕರಿಗೆ ಶಸ್ತ್ರಾಸ್ತ್ರಗಳನ್ನು ತೋರಿಸಿ ದರೋಡೆ ಮಾಡಿದ್ದಾರೆ. ಅಷ್ಟೇ ಅಲ್ಲದೆ 20 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಂಧಿತರಿಂದ 34 ಸಾವಿರ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
PublicNext
09/10/2021 05:40 pm