ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೊಲೀಸರ ಕಿರುಕುಳ ಆರೋಪ: ವಿಷ ಸೇವಿಸಿದ್ದ ಯುವಕ ಆಸ್ಪತ್ರೆಯಲ್ಲಿ ಸಾವು

ಚಿಕ್ಕಬಳ್ಳಾಪುರ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇವರಿಗೆ ಪೊಲೀಸರು ಕಿರುಕುಳ ಕೊಟ್ಟಿದ್ದರೆಂಬ ಕಾರಣಕ್ಕೆ ವಿಷ ಸೇವಿಸಿದ್ದರು ಎನ್ನಲಾಗಿದೆ. ಪಿಎಸ್ಐ ಪದ್ಮಾವತಿ ಎಂಬುವವರು ಯುವಕ ವೆಂಕಟೇಶ್ ಬಾಬು ಎಂಬ ಯುವಕನಿಗೆ ಕಿರುಕುಳ ನೀಡುತ್ತಿದ್ದರು ಎಂದು ಮೃತ ಯುವಕ ಆರೋಪಿಸಿದ್ದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಕುರುಬರಪೇಟೆ ವೆಂಕಟೇಶ್ ಬಾಬು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪದ್ಮಾವತಿ ಶಿಡ್ಲಘಟ್ಟ ನಗರ ಠಾಣೆಯಲ್ಲಿ ಅಪರಾಧ ಪತ್ತೆ ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಾರೆ. ಯುವಕನ ಪತ್ನಿ ಮನೆಗೆಲಸ ಮಾಡುತ್ತಿದ್ದಳು. ಕೆಲಸ ಮಾಡುತ್ತಿದ್ದ ಮನೆಯಲ್ಲಿ ಚಿನ್ನದ ಸರ ಕಾಣೆಯಾಗಿತ್ತು. ಕೆಲಸದವಳ ಮೇಲೆ ಅನುಮಾನ ವ್ಯಕ್ತಪಡಿಸಿ ದೂರು ನೀಡಲಾಗಿತ್ತು. ಪತ್ನಿಯ ಬದಲು ಆಕೆಯ ಗಂಡನಿಗೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಪ್ರಕರಣ ದಾಖಲಿಸದೆ ಯುವಕನಿಗೆ ಇನ್ಸ್ಪೆಕ್ಟರ್ ಪದ್ಮಾವತಿ ಚಿತ್ರಹಿಂಸೆ ನೀಡುತ್ತಿದ್ದರೆಂದು ಆರೋಪಿಸಿದ್ದಾರೆ.

Edited By : Nagaraj Tulugeri
PublicNext

PublicNext

10/10/2021 09:22 am

Cinque Terre

52.57 K

Cinque Terre

6

ಸಂಬಂಧಿತ ಸುದ್ದಿ