ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲುಷಿತ ನೀರು ಸೇವನೆ: ಮಕರಬ್ಬಿಯಲ್ಲಿ ವಾಂತಿಭೇದಿ- ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಿಜಯನಗರ: ಜಿಲ್ಲೆಯ ಹೂವಿನ ಹಡಗಲಿ ತಾಲ್ಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ, ಅಸ್ವಸ್ಥರಾಗಿದ್ದ ವೃದ್ಧೆಯೊಬ್ಬರು ಭಾನುವಾರ ಸಂಜೆ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ನಾಗಮ್ಮ ದೊಡ್ಡಬಾರಕೇರ (72) ಮೃತ ವೃದ್ಧೆ. 10 ದಿನಗಳ ಹಿಂದೆ ಅಜ್ಜಿಗೆ ವಾಂತಿಭೇದಿ ಕಾಣಿಸಿಕೊಂಡಿತ್ತು. ಗ್ರಾಮದಲ್ಲಿ ತೆರೆಯಲಾಗಿದ್ದ ತಾತ್ಕಾಲಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಭಾನುವಾರ ಬೆಳಿಗ್ಗೆ ಮತ್ತೆ ವಾಂತಿಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದರಿಂದ ತಾತ್ಕಾಲಿಕ ಆಸ್ಪತ್ರೆಗೆ ಕರೆ ತರಲಾಗಿತ್ತು. ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ತಾಲ್ಲೂಕು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಮಕರಬ್ಬಿಯಲ್ಲಿ 15 ದಿಗಳ ಹಿಂದೆ ಕಲುಷಿತ ನೀರು ಸೇವಿಸಿ 170ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು. ಈ ಪೈಕಿ ಗಂಭೀರ ಸ್ಥಿತಿಯಲ್ಲಿದ್ದ 33 ಜನರನ್ನು ಹೂವಿನಹಡಗಲಿ, ಹೊಳಲು, ಹುಬ್ಬಳ್ಳಿ, ಹಾವೇರಿ, ರಾಣೇಬೆನ್ನೂರು ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ 10 ದಿನಗಳ ಅವಧಿಯಲ್ಲಿ 6 ಜನರು ಮೃತಪಟ್ಟಿದ್ದರು. ಸದ್ಯ ಹುಬ್ಬಳ್ಳಿಯ ಆಸ್ಪತ್ರೆಗಳಲ್ಲಿ ಮೂವರು, ದಾವಣಗೆರೆಯಲ್ಲಿ ಇಬ್ಬರು, ಗದಗ ಆಸ್ಪತ್ರೆಯಲ್ಲಿ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

Edited By : Vijay Kumar
PublicNext

PublicNext

10/10/2021 10:00 pm

Cinque Terre

88.17 K

Cinque Terre

3