ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಸರಣಿ ದಾಳಿ ಮೂಲಕ ಸಿಖ್ ಹಾಗೂ ಮುಸ್ಲಿಂ ಸಮುದಾಯ ಮತ್ತು ಕಾಶ್ಮೀರಿ ಪಂಡಿತರ ಹತ್ಯೆಯಲ್ಲಿ ಭಾಗಿಯಾಗಿದ್ದರೆನ್ನಲಾದ ಸುಮಾರು 700ಕ್ಕೂ ಹೆಚ್ಚು ಜನರನ್ನು ಅಲ್ಲಿನ ಭದ್ರತಾ ಪಡೆ ಸಿಬ್ಬಂದಿ ಬಂಧಿಸಿದ್ದಾರೆ..
ಬಂಧಿತರಾದ ಅನೇಕ ಜನರು ನಿಷೇಧಿತ ಜಮಾತ್-ಇ-ಇಸ್ಲಾಮಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಅಥವಾ ಶಂಕಿತ ಭೂಗತ ಕಾರ್ಮಿಕರ ಪಟ್ಟಿಯಲ್ಲಿದ್ದಾರೆ ಎಂದು ಶಂಕಿಸಲಾಗಿದೆ. ಕೊಲೆಗಾರರನ್ನು ಪತ್ತೆ ಮಾಡದೇ ಬಿಡುವುದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾಶ್ಮೀರ ಕಣಿವೆಯಲ್ಲಿನ ದಾಳಿಗಳ ಸರಪಣಿಯನ್ನು ತುಂಡರಿಸಲು ಈ ಬಂಧನಗಳನ್ನು ನಡೆಸಲಾಗಿದೆ. ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಉಗ್ರವಾದ ಹೆಚ್ಚಲು ಪ್ರಚೋದನೆ ದೊರಕಿದೆ. ಹೀಗಾಗಿ ಕಣಿವೆಯಲ್ಲಿ ದಾಳಿಗಳು ನಡೆಯುತ್ತಿವೆ. ಉಗ್ರರು ಸುಲಭದ ಗುರಿಗಳನ್ನು ಹುಡುಕಿಕೊಂಡು ಹೋಗುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
PublicNext
11/10/2021 07:25 am