ಬೆಂಗಳೂರು: ತಂದೆಯೇ ಮಗನನ್ನು ಬರ್ಬರವಾಗಿ ಕೊಲೆಗೈದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಕೆ.ಹೆಚ್.ಬಿ ಕಾಲೋನಿಯಲ್ಲಿ ನಡೆದಿದೆ.
ಸಂತೋಷ್ ಕೊಲೆಯಾದ ಮಗ, ಗುರುಮೂರ್ತಿ ಹತ್ಯೆಗೈದ ಆರೋಪಿ. ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆರೋಪಿ ಗುರುಮೂರ್ತಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
ಆಸ್ತಿ ವಿಚಾರವಾಗಿ ಗುರುಮೂರ್ತಿ ಹಾಗೂ ಸಂತೋಷ್ ನಡುವೆ ಜಗಳವಾಗಿದೆ. ಇದೇ ವಿಚಾರಕ್ಕೆ ಗುರುಮೂರ್ತಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ತಂದೆ ಮಕ್ಕಳಿಬ್ಬರು ಡ್ರೈವಿಂಗ್ ಸ್ಕೂಲ್ ನಡೆಸುತ್ತಿದ್ದರು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
PublicNext
11/10/2021 08:07 pm