ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಹಾರಾಷ್ಟ್ರ: ಅಪ್ರಾಪ್ತೆ ಮೇಲೆ ನಿರಂತರವಾಗಿ ಅತ್ಯಾಚಾರ; ಆರೋಪಿ ಅರೆಸ್ಟ್

ಮುಂಬೈ: 15 ವರ್ಷದ ಬಾಲಕಿಯ ಮೇಲೆ ಕಾಮುಕನೋರ್ವ ನಿರಂತರವಾಗಿ ಅತ್ಯಾಚಾರ ಎಸಗಿದ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ.

ಕಾಮುಕನ ಕೃತ್ಯಕ್ಕೆ ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಾಳೆ. 20 ವರ್ಷದ ಯುವಕನನ್ನು ಸೋಮವಾರ ರಾತ್ರಿ ಬಂಧಿಸಲಾಗಿದೆ ಎಂದು ಜವಾಹರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಪಾಲ್ಘರ್ ಜಿಲ್ಲೆಯ ಜವಹಾರ್ ತಾಲೂಕಿನ ಗ್ರಾಮವೊಂದರ ನಿವಾಸಿಯಾದ ಆರೋಪಿಯು, ಅದೇ ಗ್ರಾಮದ ಬಾಲಕಿಯ ಮೇಲೆ ಸುಮಾರು ಒಂದು ವರ್ಷದಿಂದ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದು, ಕಳೆದ ಒಂದೆರೆಡು ದಿನಗಳ ಹಿಂದೆ ಅಕಾಲಿಕವಾಗಿ ಮಗುವಿಗೆ ಜನ್ಮ ನೀಡಿದ್ದರು ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಬಾಲಕಿ ಶನಿವಾರ ಸಲ್ಲಿಸಿದ ದೂರಿನ ಆಧಾರದ ಮೇಲೆ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಯುವಕನ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

Edited By : Vijay Kumar
PublicNext

PublicNext

12/10/2021 04:08 pm

Cinque Terre

29.32 K

Cinque Terre

2

ಸಂಬಂಧಿತ ಸುದ್ದಿ