ಬೆಂಗಳೂರು: ನಿವೃತ್ತ ಡಿಜಿ ಮತ್ತು ಐಜಿಪಿ ಶಂಕರ್ ಬಿದರಿ ಅವರ ಬ್ಯಾಂಕ್ ಖಾತೆಗೆ ಸೈಬರ್ ಕಳ್ಳರು ಕನ್ನ ಹಾಕಿರುವ ಘಟನೆ ನಡೆದಿದೆ.
ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ಶಂಕರ್ ಬಿದರಿ ಅವರಿಗೆ ಕಳ್ಳರು ಫೋನ್ ಮಾಡಿ ವಂಚನೆ ಮಾಡಿದ್ದಾರೆ. ನಿಮ್ಮ ಅಕೌಂಟ್ಗೆ ಪಾನ್ ಕಾರ್ಡ್ ಲಿಂಕ್ ಮಾಡಬೇಕು. ಲಿಂಕ್ ಮಾಡದಿದ್ದರೆ ಖಾತೆ ಬಂದಾಗುತ್ತದೆ ಎಂದು ಹೇಳಿ ಒಟಿಪಿ ಪಡೆದು ಅಕೌಂಟ್ನಲ್ಲಿದ್ದ 89 ಸಾವಿರ ರೂಪಾಯಿ ವಂಚನೆ ಮಾಡಿದ್ದಾರೆ. ಆಗ್ನೇಯ ವಿಭಾಗದ ಸಿಇಎನ್ ಠಾಣೆಗೆ ಶಂಕರ್ ಬಿದರಿ ದೂರು ನೀಡಿದ್ದಾರೆ. ಬಿದರಿ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
PublicNext
15/10/2021 10:35 pm