ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೈದ ಪತಿ ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ನಡೆದಿದೆ.
ಪತ್ನಿ ರೋಜಾ (28)ಳನ್ನು ಚಾಕುವಿನಿಂದ ಇರಿದು ಹತ್ಯೆಗೈದು ಪತಿ ಮಂಜುನಾಥ್ (32) ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಕನಕಪುರ ಮೂಲದ ಮಂಜುನಾಥ್ ಹಾಗೂ ಮಾವಳ್ಳಿಯ ರೋಜಾಗೆ 4 ವರ್ಷದ ಹಿಂದೆ ವಿವಾಹವಾಗಿತ್ತು. ಆದರೆ ಮಕ್ಕಳಿರಲಿಲ್ಲವಂತೆ.
ಮಂಜುನಾಥ್ ಲೇತ್ ಮಿಷನ್ ಕೆಲಸ ಮಾಡುತ್ತಿದ್ದನಂತೆ. ಇಂದು ಮಧ್ಯಾಹ್ನ ಇಬ್ಬರ ನಡುವೆ ಕೌಟುಂಬಿಕ ಕಾರಣಕ್ಕೆ ಗಲಾಟೆಯಾಗಿದೆ. ಸಂಜೆಯಾದರು ಮನೆಯ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಸ್ಥಳೀಯರು ಬಾಗಿಲು ಓಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
17/10/2021 11:16 pm