ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಶ್ಮೀರದಲ್ಲಿ ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಕೊಂದ ಉಗ್ರರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಅಟ್ಟಹಾಸ ಮತ್ತೆ ಮುಂದುವರೆದಿದೆ. ಉಗ್ರರು ನಾಗರಿಕರ ಸರಣಿ ಹತ್ಯೆಯಲ್ಲಿ ತೊಡಗಿದ್ದಾರೆ. ಕುಲ್ಗಾಂ ಜಿಲ್ಲೆಯಲ್ಲಿ ಭಾನುವಾರ ಉಗ್ರರು ಮತ್ತೆ ಇಬ್ಬರು ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಹಾಗೂ ಮತ್ತೊಬ್ಬರನ್ನು ಗಾಯಗೊಳಿಸಿದ್ದಾರೆ.

"ಕುಲ್ಗಾಂನ ವಾನ್ಪೋಹ್ ಪ್ರದೇಶದಲ್ಲಿ ಕಾರ್ಮಿಕರ ಮೇಲೆ ಭಯೋತ್ಪಾದಕರು ಮನಸೋ ಇಚ್ಛೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಹೊರ ರಾಜ್ಯದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ" ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮೂಲಕ ತಿಳಿಸಿದ್ದಾರೆ.

Edited By : Nagaraj Tulugeri
PublicNext

PublicNext

18/10/2021 07:27 am

Cinque Terre

60.61 K

Cinque Terre

13

ಸಂಬಂಧಿತ ಸುದ್ದಿ