ತುಮಕೂರು: ಮಗುವಿಗೆ ಜನ್ಮ ನೀಡಿದ ನಂತರ ತಾಯಿ ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾಳೆ ಎಂದು ಆರೋಪಿಸಿ ಸಂಬಂಧಿಕರು ಆಸ್ಪತ್ರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತುಮಕೂರು ಜಿಲ್ಲೆ ಪಾವಗಡದ ಮಾತೃಶ್ರೀ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.
ಪಾವಗಡ ತಾಲೂಕಿನ ರಾಜವಂತಿ ಗ್ರಾಮದ ಹೇಮಲತಾ ಮೃತಪಟ್ಟ ತಾಯಿ. ಪ್ರತಿಭಟನೆ ವೇಳೆ ಭಯದಿಂದ ವೈದ್ಯಕೀಯ ಸಿಬ್ಬಂದಿ ಕೊಠಡಿಯಲ್ಲಿ ಅವಿತು ಕೂತಿದ್ದರು. ಮೃತಳ ಸಂಬಂಧಿಕರು ಕೊಠಡಿಯ ಬಾಗಿಲು ಮುರಿಯಲು ಯತ್ನಿಸಿದ್ದಾರೆ ಹಾಗೂ ಪಿಠೋಪಕರಣ ಧ್ವಂಸಗೊಳಿಸಿದ್ದಾರೆ. ವೈದ್ಯರು ಬಾಣಂತಿಯ ಆರೋಗ್ಯದ ಬಗ್ಗೆ ನಿಗಾ ವಹಿಸಿಲ್ಲ. ಸಕಾಲಕ್ಕೆ ಚಿಕಿತ್ಸೆ ಹಾಗೂ ಆರೈಕೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ಮೃತ ಹೇಮಲತಾ ಸಂಬಂಧಿಕರ ಆರೋಪವಾಗಿದೆ. ಪಾವಗಡ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ.
PublicNext
18/10/2021 03:24 pm