ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ; ಒಂದೇ ಕುಟುಂಬದ ಮೂವರು, ಲಾರಿ ಚಾಲಕ ಸ್ಥಳದಲ್ಲಿ ಸಾವು

ವಿಜಯಪುರ: ಕೆಟ್ಟು ನಿಂತಿದ್ದ ಲಾರಿಗೆ ಕಾರ್‌ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಹಾಗೂ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಜಿಲ್ಲೆಯಲ್ಲಿ ಇಂದು ನಡೆದಿದೆ.

ಮೃತರ ಬಗ್ಗೆ ಇನ್ನೂ ಮಾಹಿತಿ ತಿಳಿದು ಬಂದಿಲ್ಲ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಘಟನೆ ನಡೆದಿದೆ. ಕಾರಿನಲ್ಲಿದ್ದ ವಿಜಯಪುರ ನಗರದ ಮೂಲದ ಓರ್ವ ಪುರುಷ, ಓರ್ವ ಮಹಿಳೆ ಹಾಗೂ ಮಗು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಜೊತೆಗೆ ಲಾರಿ ರಿಪೇರಿ ಮಾಡುತ್ತಿದ್ದ ಚಾಲಕ ಕೂಡ ದುರಂತ ಸಾವು ಕಂಡಿದ್ದಾನೆ.

ಕಾರಿನಲ್ಲಿದ್ದ ಇತರೆ ಮೂವರಿಗೆ ಗಾಯವಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Vijay Kumar
PublicNext

PublicNext

20/10/2021 11:44 am

Cinque Terre

63.04 K

Cinque Terre

0

ಸಂಬಂಧಿತ ಸುದ್ದಿ